National

*ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ ಸಾಧ್ಯತೆ: 48 ಪ್ರವಾಸಿ ತಾಣಗಳಿಗೆ ನಿರ್ಬಂಧ*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಪ್ರವಾಸಿಗರನ್ನು ಗುರುಯಾಗಿಸಿ ನಡೆಸಿದ ಗುಂಡಿನ ದಾಳಿಯಲ್ಲಿ 26 ಜನರು ಬಲಿಯಾಗಿರುವ ಘಟನೆ ಬೆನ್ನಲ್ಲೇ ಉಗ್ರರ ವಿರುದ್ಧದ ಸೇನೆ ಕಾರ್ಯಾಚರಣೆ ಚುರುಕುಗೊಂಡಿದೆ. ಈ ನಡುವೆ ಕಾಶ್ಮೀರದ ಹಲವು ಪ್ರವಾಸಿ ತಾಣಗಳು ಬಂದ್ ಆಗಿವೆ.

ಕಾಶ್ಮೀರದಲ್ಲಿ ಮತ್ತೆ ಉಗ್ರರು ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅರ್ಧದಷ್ಟು ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿದೆ.

ಕಾಶ್ಮೀರದ 87 ಪ್ರವಾಸಿ ತಾಣಗಳ ಪೈಕಿ 48 ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಈ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button