Kannada NewsKarnataka NewsLatest

*ಶೃಂಗೇರಿ ಬಂದ್ ಗೆ ವ್ಯಾಪಕ ಬೆಂಬಲ: ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ*

ಕಸ್ತೂರಿ ರಂಗನ್ ವರದಿಯ ಅನುಷ್ಠಾನವನ್ನು ವಿರೋಧಿಸಿ ಇಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ. ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಬಂದ್ ಆಚರಿಸಲಾಗುತ್ತಿದೆ. ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ಸೇರಿದಂತೆ ಹಲವು ರೈತ ಸಂಘಟನೆಗಳು ಈ ಬಂದ್‌ಗೆ ಬೆಂಬಲ ಸೂಚಿಸಿವೆ. ಈಗಾಗಲೇ ಬಂದ್ ಪ್ರಕ್ರಿಯೆ ಆರಂಭವಾಗಿದ್ದು, ಶೃಂಗೇರಿ ಪಟ್ಟಣದಾದ್ಯಂತ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿವೆ.

Home add -Advt

ಕಸ್ತೂರಿ ರಂಗನ್ ವರದಿ ಜಾರಿಗೆ ಬಂದರೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನಸಾಮಾನ್ಯರ ಜೀವನಕ್ಕೆ ಗಂಭೀರ ಹೊಡೆತ ಬೀಳಲಿದೆ ಎಂದು ರೈತ ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ. ಈ ವರದಿಯು ಅವೈಜ್ಞಾನಿಕವಾಗಿದ್ದು, ಜನರ ಬದುಕಿಗೆ ಮಾರಕ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ವರದಿಯನ್ನು ಜಾರಿಗೊಳಿಸಬಾರದು ಎಂಬುದು ಅವರ ಪ್ರಮುಖ ಆಗ್ರಹವಾಗಿದೆ.

ಬಂದ್ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತರಾಗಿ ಶೃಂಗೇರಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ. ಕೆಲವು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಪ್ರವಾಸಿಗರಲ್ಲಿಯೂ ಕೂಡ ಶೃಂಗೇರಿಗೆ ಪ್ರಯಾಣಿಸದಂತೆ ಹೋರಾಟಗಾರರು ಮನವಿ ಮಾಡಿಕೊಂಡಿದ್ದಾರೆ.

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಕಸ್ತೂರಿ ರಂಗನ್ ವರದಿ ವಿಚಾರವಗಿಯೂ ಚರ್ಚೆ ನಡೆಯಲಿವೆ. ಈ ಸಂದರ್ಭದಲ್ಲಿ ಶೃಂಗೇರಿ ಬಂದ್ ಮೂಲಕ ಸರ್ಕಾರದ ಗಮನ ಸೆಳೆಯಲಾಗುತ್ತಿದೆ.

Related Articles

Back to top button