Latest

ಕೊರೊನಾ ಸೋಂಕಿತರ ಸಂಖ್ಯೆ ಜೊತೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಳ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 70,496 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 69 ಲಕ್ಷ ಗಡಿ ದಾಟಿದೆ. ಇದೇವೇಳೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 69,06,152ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 964 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,06,490ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 8,93,592 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 59,06,070 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button