Karnataka News
*ಕಾಟಿಪಳ್ಳ ಮಸೀದಿ ಮೇಲೆ ಕಲ್ಲು ತೂರಾಟ; ಬಿಗಿ ಭದ್ರತೆ*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಭೆ ಪ್ರಕರಣ ನಡೆದಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಾಟಿಪಳ್ಳದಲ್ಲಿ ಈದ್ ಮಿಲಾದ್ ವೇಳೆ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ.
ಕಾಟಿಪಳ್ಳದಲ್ಲಿ ನಿನ್ನೆ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮಸೀದಿ ಗಾಜುಗಳು ಪುಡಿ ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನ ಘಟನೆ ನಡೆದಿದೆ.
ಎರಡು ಬೈಕ್ ಗಳಲ್ಲಿ ಬಂದ ನಾಲ್ವರು ಕಿಡಿಗೇಡಿಗಳು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿ ಎಸ್ಕೇಪ್ ಆಗಿದ್ದಾರೆ. ಸದ್ಯ ಕಾಟಿಪಳ್ಳ ವ್ಯಾಪ್ತಿಯಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.




