Kannada NewsKarnataka NewsLatest

*ರಾಜ್ಯಾದ್ಯಂತ ಒಂದು ವಾರ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಒಂದು ವಾರ ಕಾಲ ರಾಜ್ಯಾದ್ಯಂತ ಭಾರೀ ಮಳೆ ಹಾಗೂ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಧರಾಕಾರ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲೆಗಳಲ್ಲಿ ವರುಣಾರ್ಭಟ ಜೋರಾಗಲಿದೆ.

ಐಎಂಡಿಯ ಏಳು ದಿನಗಳ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಜೂನ್ 12ರಂದು ಭಾರಿ ಮಳೆ ಸಾಧ್ಯತೆ ಇದೆ. ಜೂನ್ 14ರಿಂದ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗಲಿದ್ದು, ಜೂನ್ 15 ಮತ್ತು 16ರಂದು ಯಾವುದೇ ಪ್ರಮುಖ ಎಚ್ಚರಿಕೆಗಳನ್ನು ನೀಡಿಲ್ಲ.

ಉತ್ತರ ಒಳನಾಡು ಕರ್ನಾಟಕದಲ್ಲಿ ಈ ವಾರ ಗುಡುಗು, ಮಿಂಚು, ಬಿರುಗಾಳಿ ಮತ್ತು ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನಲ್ಲಿಯೂ ಭಾರಿ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು, ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಹಾಗೂ ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದು ಅಥವಾ ಎರಡು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ರಾಯಚೂರು, ಬೀದರ್​​, ಕಲಬುರಗಿ,ಯಾದಗಿರಿ, ವಿಜಯಪುರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಹಾವೇರಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button