Kannada NewsKarnataka NewsLatestPolitics
*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು; ಕುತೂಹಲ ಮೂಡಿಸಿದ ಚರ್ಚೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು.
ಬೆಂಗಳೂರಿನ ಸದಾಶಿವನಗರ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಡಿ.ಕೆ.ಶಿವಕುಮಾರ್ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಈ ವೇಳೆ ಕೆಲ ಕಾಲ ಸಮಾಲೋಚನೆ ನಡೆಸಿದರು.
ರಾಜ್ಯದಲ್ಲಿ ಪಕ್ಷಾಂತರ ಪರ್ವ ವಿಚಾರ ಹಾಗು ಬಿಜೆಪಿ ನಾಯಕರು ಕಾಂಗ್ರೆಸ್ ಗೆಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿರುವಾಗಲೇ ಬಿಜೆಪಿ ಹಿರಿಯ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.