
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ವಿರುದ್ಧ ಗಂಭೀರ ಅರೋಪ ಮಾಡಿದ್ದು, ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 30% ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಟ್ಟಾ ಸುಬ್ರಹ್ಮಣ್ಯನಾಯ್ಡು, ಹೆಬ್ಬಾಳ ಕ್ಷೇತ್ರ ಅಭಿವೃದ್ದ್ಜಿಗಾಗಿ 650 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. 8 ಜನ ಅಧಿಕಾರಿಗಳು ಸಹ ಕಮಿಷನ್ ದಂಧೆಯಲ್ಲಿ ಭಾಗಿಯಾಗಿದ್ದಾರೆ. ಕೇವಲ ಶೇ.40ರಷ್ಟು ಮಾತ್ರ ಕೆಲಸ ಆಗಿದೆ. ದಾಖಲೆಗಳಿಲ್ಲದೇ ನಾನು ಮಾತನಾಡಲ್ಲ ಎಂದು ಹೇಳಿದರು.
ಕ್ಷೇತ್ರದಲ್ಲಿ ಭ್ರಷ್ಟಾಚಾರ ಇಲ್ಲದೇ ಯಾವುದೇ ಕಾಮಗಾರಿ ನಡೆಯುತ್ತಿಲ್ಲ. ದುಡ್ಡು ಕೊಟ್ಟರೆ ಮಾತ್ರ ಶಾಸಕರು ಕಾಮಗಾರಿ ಪೂಜೆಗೆ ಬರ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನಾನು ಶಾಕನಾಗಿದ್ದ ಸಂದರ್ಭದಲ್ಲಿ ಮಂಜೂರಾದ ಹಕ್ಕು ಪತ್ರಗಳಿಗೆ ನಕಲಿ ಸಹಿ ಮಾಡುವ ಕೆಲಸ ನಡೆಯುತ್ತಿದೆ. ಕಳಗೇರಿ ಅಭಿವೃದ್ಧಿ ಮಂಡಳಿ ಹಕ್ಕು ಪತ್ರದಲ್ಲಿ ಫೋರ್ಜರಿ ಮಾಡಲಾಗುತ್ತಿದೆ. ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಬೇಕು. ಎಸಿಬಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಯುವತಿಗಾಗಿ ಯುವಕನನ್ನೇ ಕೊಂದ ಕಿರಾತಕರು