Kannada NewsKarnataka NewsLatest

*ಸಚಿವ ದಿನೇಶ್ ಗುಂಡೂರಾವ್ ಪ್ರಯಾಣಿಸುತ್ತಿದ್ದ ವಿಮಾನ ಮಂಗಳೂರು ಬದಲು ಕಣ್ಣೂರಿನಲ್ಲಿ ಲ್ಯಾಂಡಿಂಗ್*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಭಾರಿ ಮಳೆಯಿಂದಾಗಿ ಪ್ರತಿಕೂಲ ಹವಾಮಾನ ಕಾರಣಕ್ಕೆ ಸಚಿವ ದಿನೇಶ್ ಗುಂಡೂರಾವ್ ಪ್ರಯಾಣಿಸುತ್ತಿದ್ದ ವಿಮಾನ ಮಂಗಳೂರು ಬದಲು ಕಣ್ಣೂರಿನಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ.

ಹವಾಮಾನ ವೈಪರಿತ್ಯದಿಂದಾಗಿ ಬೆಂಗಳೂರು-ಮಂಗಳೂರು ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ. ಮಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿದ್ದ ಸಚಿವ ದಿನೇಶ್ ಗುಂಡೂರಾವ್ ಪ್ರಯಾಣಿಸುತ್ತಿದ್ದ ವಿಮಾನ ಕಣ್ಣೂರಿಗೆ ಡೈವರ್ಟ್ ಮಾಡಲಾಗಿದೆ.

Home add -Advt

ಬೆಳಿಗ್ಗೆ ಬೆಂಗಳೂರಿನಿಂದ ಹೊರಟಿದ್ದ ಇಂಡಿಗೋ ವಿಮಾನ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಲ್ಯಾಂಡಿಂಗ್ ಡೈವರ್ಟ್ ಮಾಡಲಾಗಿದ್ದು, ಕೇರಳದ ಕಣ್ಣೂರಿನಲ್ಲಿ ಲ್ಯಾಂಡ್ ಆಗಿದೆ.

ಹವಾಮಾನ ಸುಧಾರಿಸಿದ ಬಳಿಕ ಮತ್ತೆ ಕಣ್ಣೂರು ಏರ್ ಪೋರ್ಟ್ ನಿಂದ ಮಂಗಳೂರು ಏರ್ ಪೋರ್ಟ್ ಗೆ ಟೇಕ್ ಆಫ್ ಆಗಿದೆ.


Related Articles

Back to top button