
ಪ್ರಗತಿವಾಹಿನಿ ಸುದ್ದಿ: ರಾಧಾ ರಮಣ ಖ್ಯಾತಿಯ ಸಿರಿಯಲ್ ನಟಿ ಕಾವ್ಯಾ ಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿಯ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಈ ಘಟನೆ ನಡೆದಿದೆ. ಕಾವ್ಯಾ ಗೌಡ ಅವರ ಪತಿ ಸೋಮಶೇಖರ್ ಸಂಬಂಧಿಕರು ಮನೆಗೆ ನುಗ್ಗಿ ಗಲಾಟೆ ಮಾಡಿ ಕಾವ್ಯಾ ಗೌಡಳ ಮೇಲೆ ಹಲ್ಲೆ ನಡೆಸಿದ್ದಲ್ಲದೇ ನಿನ್ನನ್ನು ರೇಪ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೇ ಸೋಮಶೇಖರ್ ಗೆ ಚಾಕುವಿನಿಂದ ಇರುದು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಗಾಯಾಳು ಕಾವ್ಯಾ ಗೌಡ ಹಾಗೂ ಪತಿ ಸೋಮಶೇಖರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಮಮೂರ್ತಿ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


