EducationKarnataka NewsLatest

*KCET ಫಲಿತಾಂಶ ಪ್ರಕಟ*

ಪ್ರಗತಿವಾಹಿನಿ ಸುದ್ದಿ: 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ.

ರಾಜ್ಯದ ಅತ್ಯಂತ ಪೈಪೋಟಿಯುಕ್ತ ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್ ಹಾಗೂ ವೆಟರ್ನರಿ (ಪಶುಸಂಗೋಪನೆ) ವಿಭಾಗದ ಟಾಪರ್‌ಗಳ ಪಟ್ಟಿಯನ್ನು ಸಹ ಪ್ರಕಟಿಸಲಾಗಿದ್ದು, ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.

Related Articles

ಇಂಜಿನಿಯರಿಂಗ್ ವಿಭಾಗದ ಫಲಿತಾಂಶದಲ್ಲಿ ಬೆಂಗಳೂರಿನ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಬೆಂಗಳೂರಿನ ಜಯನಗರದಲ್ಲಿರುವ ಪ್ರತಿಷ್ಠಿತ ಆರ್​.ವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ತನಿಷಾ ಕಾರ್ತಿಕ್ ಅವರು ಇಂಜಿನಿಯರಿಂಗ್ ವಿಭಾಗದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನುಳಿದಂತೆ ಇದೇ ವಿಭಾಗದಲ್ಲಿ ಸೃಜನ್​ ದ್ವಿತೀಯ ಸ್ಥಾನ ಪಡೆದರೆ, ನಿನಾದ್ ವಿಶಿಷ್ಟ ತೃತೀಯ ಸ್ಥಾನವನ್ನು ಪದೆದಿದ್ದಾರೆ.

ಪಶುಸಂಗೋಪನೆಅಥವಾ ವೆಟರ್ನರಿ ವಿಭಾಗದಲ್ಲಿ ಬೆಂಗಳೂರಿನ ಶಿವನಗರದ ಪಿಯು ಕಾಲೇಜಿನ ವಿದ್ಯಾರ್ಥಿನಿ ನಯನ ಗೋಪಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ವಿಭಾಗದಲ್ಲಿ ದ್ವಿತೀಯ ರ‍್ಯಾಂಕ್ ಅನ್ನು ದಾವಣಗೆರೆಯ ಸರ್​​ ಎಂ.ವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಪಡೆದುಕೊಂಡರೆ, ಆರ್​.ವಿ ಪಿಯು ಕಾಲೇಜಿನ ರಿತಿಕ್ ಕುಮಾರ್ ಅವರು ತೃತೀಯ ರ‍್ಯಾಂಕ್ ಪಡೆದಿದ್ದಾರೆ.

Home add -Advt

ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗಳಾದ https://cetonline.karnataka.gov.in/kea/ ಅಥವಾ karresults.nic.in ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

Related Articles

Back to top button