ಪ್ರಗತಿವಾಹಿನಿ ಸುದ್ದಿ; ಶಿರಸಿ: ರಾಜ್ಯ ಕಾರ್ಮಿಕ ಖಾತೆ ಸಚಿವ ಹಾಗೂ ಕೆ.ಡಿ.ಸಿ.ಸಿ ಬ್ಯಾಂಕ್ ನ ಅಧ್ಯಕ್ಷರಾದ ಶಿವರಾಮ ಹೆಬ್ಬಾರ್ ಅವರು ಕೆ.ಡಿ.ಸಿ.ಸಿ ಬ್ಯಾಂಕ್ ಇತಿಹಾಸದಲ್ಲೇ ಮೊದಲ ಬಾರಿಗೆ ಬ್ಯಾಂಕ್ ನ ನಿವೃತ್ತ ನೌಕರರಿಗೆ ಪಿಂಚಣಿ ಸೌಲಭ್ಯಗಳನ್ನು ನೀಡುವ ಯೋಜನೆಯನ್ನು ಜಾರಿಗೊಳಿಸಿದ್ದಾರೆ.
ಸೋಮವಾರ ಸಚಿವ ಶಿವರಾಮ ಹೆಬ್ಬಾರ್ ಅವರು ಬ್ಯಾಂಕ್ ನ ಪ್ರಧಾನ ಕಾರ್ಯಾಲಯದ ಸಭಾಂಗಣದಲ್ಲಿ ಬ್ಯಾಂಕ್ ನ ನಿವೃತ್ತ ನೌಕರರಿಗೆ ಸಾಂಕೇತಿಕವಾಗಿ ಪಿಂಚಣಿ ಚೆಕ್ ಅನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ನ ಉಪಾಧ್ಯಕ್ಷರು, ಸರ್ವ ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಹಾಯಕ ವ್ಯವಸ್ಥಾಪಕರು, ನಿವೃತ್ತ ನೌಕರರು, ಬ್ಯಾಂಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸನ್ಮಾನದ ಶಾಲುಗಳನ್ನು ವೃದ್ಧಾಶ್ರಮಕ್ಕೆ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ