Kannada NewsKarnataka NewsLatestPolitics

*ಚುನಾವಣಾ ಅಖಾಡಕ್ಕೆ ದಿಂಗಾಲೇಶ್ವರ ಶ್ರೀಗಳು*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು‌ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಲ್ಲಿ ದಿಂಗಾಲೇಶ್ವರ ಶ್ರೀಗಳು ಘೋಷಣೆ ಮಾಡಿದರು.

Home add -Advt

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಲ್ಲಿ ದಿಂಗಾಲೇಶ್ವರ ಶ್ರೀಗಳು ಸೋಮವಾರ ಮಧ್ಯಾಹ್ನ ಸುದ್ದಿಗೋಷ್ಟಿ‌ ನಡೆಸಿ ಮಾತನಾಡಿ,ದಾರವಾಡದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್ ಫಿಕ್ಸಿಂಗ್ ಮಾಡಿಕೊಂಡಿವೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇದು ಮತದಾರರಿಗೆ ಮಾಡಿದ ದ್ರೋಹವಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳು ಅಭ್ಯರ್ಥಿ ಘೋಷಣೆ ಮಾಡಿವೆ ಆದರೆ ಮತದಾರರು ನಮ್ಮನ್ನು ಚುನಾವಣೆಗೆ ನಿಲ್ಲಿಸುವ ನಿರ್ಧಾರ ಮಾಡಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ, ಸ್ವಾರ್ಥಿ ರಾಜಕಾರಣಿಗಳ ವಿರುದ್ಧ ಸ್ವಾಭಿಮಾನಿ ಧರ್ಮಗುರುಗಳು ಮಾಡಿದ ಧರ್ಮ ಯುದ್ಧ ಘೋಷಣೆ ಇದಾಗಿದೆ ಎಂದರು.

Related Articles

Back to top button