
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಬಂಧನವಾಗಿದೆ. 12 ದಿನಗಳಿಂದ ತಲೆಮರೆಸಿಕೊಂಡಿದ್ದ ಆರ್.ಡಿ.ಪಾಟೀಲ್ ನನ್ನು ಕಲಬುರ್ಗಿ ವಿಶೇಷ ಪೊಲೀಸ್ ತಂಡ ಬಂಧಿಸಿದೆ.
ಅಫಜಲಪುರ ಹಾಗೂ ಮಹಾರಾಷ್ಟ್ರ ಗಡಿ ಭಾಗದಲ್ಲಿ ಕಲಬುರ್ಗಿ ಪೊಲಿಸರು ಆರ್.ಡಿ.ಪಾಟೀಲ್ ನನ್ನು ಬಂಧಿಸಿದ್ದಾರೆ. ಬಂಧಿತ ಆರ್.ಡಿ.ಪಾಟೀಲ್ ನನ್ನು ಕಲಬುರ್ಗಿಗೆ ಕರೆತರಲಾಗುತ್ತಿದೆ.
ಆರ್.ಡಿ.ಪಾಟೀಲ್, 545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮದ ರೂವಾರಿಯಾಗಿದ್ದ. ಪಿಎಸ್ ಐ ಅಕ್ರಮದಲ್ಲಿ ಬಂಧಿತನಾಗಿದ್ದ ಆರ್.ಡಿ.ಪಾಟೀಲ್ ಜಾಮೀನಿನ ಮೇಲೆ ಹೊರಬಂದಿದ್ದ. ಈಗ ಇತ್ತೀಚೆಗೆ ನಡೆದಿದ್ದ ಕೆಇಎ ಪರೀಕ್ಷಾ ಅಕ್ರಮದಲ್ಲಿಯೂ ಆರ್.ಡಿ.ಪಾಟೀಲ್ ಪ್ರಮುಖ ಆರೋಪಿಯಾಗಿದ್ದ. ಪ್ರಕರಣ ಬೆಳಕಿಗೆ ಬಂದಾಗಿನಿಂದಲೂ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಆರ್.ಡಿ.ಪಾಟೀಲ್ ನನ್ನು ಕೊನೆಗೂ ಬಂಧಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ