Karnataka News

*ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸದಾವಕಾಶ: ಸರ್ಕಾರಿ ಉದ್ಯೋಗ ಬಯಸುವವರು ಅರ್ಜಿ ಸಲ್ಲಿಸಿ*

ಪ್ರಗತಿವಾಹಿನಿ ಸುದ್ದಿ: ಉದ್ಯಾಗಾಂಕ್ಷಿಗಳುಗೆ ಇಲ್ಲಿದೆ ಗುಡ್ ನ್ಯೂಸ್. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 28 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಜೂನಿಯರ್ ಅಸಿಸ್ಟೆಂಟ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳು ಖಾಲಿಯಿದ್ದು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಡಿಸೆಂಬರ್ 4 ರಿಂದ ಜನವರಿ 3 2025 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಸರ್ಕಾರಿ ಉದ್ಯೋಗ ಬಯಸುವವರಿಗೆ ಇದೊಂದು ಅಧ್ಬುತ ಅವಕಾಶ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಆರಂಭವಾಗಿದೆ. ಜೂನಿಯರ್‌ ಅಸಿಸ್ಟೆಂಟ್‌, ಕಂಪ್ಯೂಟರ್‌ ಆಪರೇಟರ್‌ ಹುದ್ದೆಗಳು ಸೇರಿದಂತೆ ಒಟ್ಟು 28 ಹುದ್ದೆಗಳು ಖಾಲಿಯಿದ್ದು, ಆಸಕ್ತರು ಈ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬಹುದು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚುವರಿ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ

  • ಸೀನಿಯರ್ ಪ್ರೋಗ್ರಾಮರ್ – 2
  • ಜೂನಿಯರ್ ಪ್ರೋಗ್ರಾಮರ್ – 2
  • ಜೂನಿಯರ್ ಕನ್ಸೋಲ್ ಆಪರೇಟರ್ – 4
  • ಕಂಪ್ಯೂಟರ್ ಆಪರೇಟರ್ – 4
  • ಸಹಾಯಕರು – 3
  • ಕಿರಿಯ ಸಹಾಯಕರು – 8
  • ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು – 5
  • ಒಟ್ಟು ಹುದ್ದೆಗಳು – 28
  • ಉದ್ಯೋಗ ಸ್ಥಳ : ಕರ್ನಾಟಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಇರಬೇಕಾದ ವಿದ್ಯಾರ್ಹತೆ

  • ಸೀನಿಯರ್ ಪ್ರೋಗ್ರಾಮರ್, ಜೂನಿಯರ್ ಪ್ರೋಗ್ರಾಮರ್, ಜೂನಿಯರ್ ಕನ್ಸೋಲ್ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೆಷನ್ ಸೈನ್ಸ್/ ಎಲೆಕ್ಟ್ರಾನಿಕ್ ಹಾಗೂ ಕಮ್ಯುನಿಕೇಷನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿರ ಬೇಕು.
  • ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯೂ ಕಂಪ್ಯೂಟರ್ ಅಪ್ಲಿಕೇಷನ್ (ಬಿಸಿಎ) ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಎಸ್ಸಿ ಪದವಿ ಪೂರ್ಣಗೊಳಿಸಿರಬೇಕು.
  • ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು ಕಾನೂನು ಪದವಿ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
  • ಕಿರಿಯ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವಿರಬೇಕು.
  • ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು ಹುದ್ದೆಗಳಿಗೆ ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿಬೇಕು. ಹಗ್ಯ್ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಹಿರಿಯ ದರ್ಜೆಯ ಬೆರಳಚ್ಚುಗಾರರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ಗರಿಷ್ಠ 38 ವರ್ಷ ಹಾಗೂ ಎಸ್ ಸಿ, ಎಸ್ ಟಿ ಪ್ರವರ್ಗ 1 ಅಭ್ಯರ್ಥಿಗಳು ಗರಿಷ್ಠ 40 ವರ್ಷ ದಾಟಿರಬಾರದು.

ಅರ್ಜಿ ಶುಲ್ಕ:

  • ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ. 750
  • ಎಸ್ ಸಿ , ಎಸ್ ಟಿ, ಪ್ರ1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ. 500
  • ವಿಕಲಚೇತನ ಅಭ್ಯರ್ಥಿಗಳಿಗೆ – ರೂ. 250

ದಿನಾಂಕಗಳು

  • ಅರ್ಜಿ ಸಲಿಸಲು ಪ್ರಾರಂಭ ದಿನಾಂಕ : ಡಿಸೆಂಬರ್ 04-2024
  • ಅರ್ಜಿ ಸಲಿಸಲು ಕೊನೆಯ ದಿನಾಂಕ – ಜನವರಿ-03-2025


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button