ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಶುಕ್ರವಾರ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಕೊರೋನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ತೆಗೆದುಕೊಂಡಿರುವ ಮುನ್ನೆಚ್ಚರಿಕೆ ಮತ್ತು ಅಲ್ಲಿನ ವಿಶೇಷ ವಾರ್ಡ್ ವ್ಯವಸ್ಥೆ ಕುರಿತು ಶಂಕರಗೌಡ ಪಾಟೀಲ ಪರಿಶೀಲನೆ ನಡೆಸಿದರು.
ಕೊರೋನಾ ವೈರಸ್ ಕರ್ನಾಟಕಕ್ಕೆ ಇನ್ನೂ ಬಾರದಿದ್ದರೂ ಅದನ್ನು ನಿರ್ಲಕ್ಷಿಸುವಂತಿಲ್ಲ. ಸರಕಾರ ಈ ಬಗ್ಗೆ ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಂಡಿದೆ. ಮುಖ್ಯಮಂತ್ರಿಗಳು ಕೂಡ ಆರೋಗ್ಯ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾಗಾಗಿ ಇಲಾಖೆ ದಿನದ 24 ಗಂಟೆಯೂ ಎಚ್ಚರಿಕೆಯಿಂದಿದ್ದು, ಪರಿಸ್ಥಿತಿಯ ಮೇಲೆ ಸೂಕ್ಷ್ಮ ಗಮನ ಇಡಬೇಕು ಎಂದು ಶಂಕರಗೌಡ ಪಾಟೀಲ ಸೂಚಿಸಿದರು.
ಇದೇ ವೇಳೆ, ಹೊಸ ಎಂಆರ್ ಐ ಸ್ಕ್ಯಾನಿಂಗ್ ಮಷೀನ್ ವಿಭಾಗಕ್ಕೂ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಬಿಮ್ಸ್ ನಿರ್ದೇಶಕ ಡಾಕ್ಟರ್ ವಿನಯ್ ದಾಸ್ತಿಕೊಪ್ಪ, ಆಸ್ಪತ್ರೆ ಸರ್ಜನ್ ಡಾಕ್ಟರ್ ಖಾಜಿ, ಬುಡಾ ಅಧ್ಯಕ್ಷ ಗೂಳಪ್ಪ ಹೊಸಮನಿ, ನ್ಯಾಯವಾದಿ ಎನ್.ಆರ್. ಲಾತೂರ್, ಸಾಮಾಜಿಕ ಹೋರಾಟಗಾರ ಶಿವಾಜಿ ಕಾಗಣಿಕರ್, ಬಿಜೆಪಿ ಮುಖಂಡರಾದ ಕಿರಣ್ ಜಾಧವ್, ಶಿವಾಜಿ ಸುಂಟಕರ್, ಮುರನಾಳ ಮೊದಲಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ