ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮತ್ತು ಕಾಂಗ್ರೆಸ್ ಒಟ್ಟಾಗಿ ಆಪ್ ಸೋಲಿಸುವ ಹುನ್ನಾರ ನಡೆಸಿದೆ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸದ್ಯ ದೇಶದಲ್ಲಿ ಬಿಜೆಪಿಯ ಪರಿಸ್ಥಿತಿ ಹೇಗಿದೆ ಎಂದರೆ ಅವರು ಕಾಂಗ್ರೆಸ್ ಪಕ್ಷದ ಮುಂದೆ ತಮ್ಮನ್ನು ಉಳಿಸಿ ಎಂದು ಮನವಿ ಮಾಡುತ್ತಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಒಟ್ಟಾಗಿ ಆಪ್ ಸೋಲಿಸುವ ಹುನ್ನಾರ ನಡೆಸಿವೆ. ಹೀಗಾಗಿ ದೆಹಲಿಯ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಂದೀಪ್ ದೀಕ್ಷಿತ್ ಅವರನ್ನು ಮುಂದೆ ಬಿಟ್ಟಿದೆ ಎಂದು ಹೇಳಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳು ಎಎಪಿಯನ್ನು ಮುಗಿಸಲು ಬಯಸಿದ್ದಾರೆ. ಹಣ ಹಂಚಿ ಬಹಿರಂಗವಾಗಿ ಮತ ಕೇಳುವವರನ್ನು ಏಕೆ ತಡೆಯುತ್ತಿಲ್ಲ? ದೆಹಲಿಯ ಜನರಿಗಾಗಿ ನಾನು ಮತ್ತೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಈ ದೇಶ ಅವರ ಪೂರ್ವಜರ ಆಸ್ತಿಯೇ? ಎಂದು ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಕೇಜ್ರಿವಾಲ್ ಗರಂ ಆಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ