Belagavi NewsBelgaum NewsKannada NewsKarnataka News
*ಬೆಳಗಾವಿಯಲ್ಲಿ ಆರಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಉತ್ತಮ ಮಳೆ ಆಗುತ್ತಿದ್ದು, ಜುಲೈ 12ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗೆಯೇ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪ. ಕಲಬುರಗಿ,ಹಾವೇರಿ, ಗದಗ, ಧಾರವಾಡ, ಬೀದರ್ನಲ್ಲಿ ಉತ್ತಮ ಮಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.




