Kannada NewsKarnataka NewsLatestPolitics

*ಕೆಂಪಣ್ಣನ ಮೇಲೆ ಸರ್ಕಾರದ ಒತ್ತಡ ಇದೆ: ಮಾಜಿ ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: 40% ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲ ಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ. ನ್ಯಾಯಾಲಯವು ಸಹ ಇದನ್ನು ಹೇಳಲು ಶುರು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40% ಕಮಿಷನ್ ಕುರಿತ ತನಿಖೆಯನ್ನು ಅನಗತ್ಯ ವಿಳಂಬ ಮಾಡಿತ್ತಿರುವ ಬಗ್ಗೆ ಹೈಕೋರ್ಟ್ ಗಮನಿಸಿ ಆರು ವಾರದಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಸರ್ಕಾರದಲ್ಲಿ ಹಣ ಇಲ್ಲದಿರುವುದಕ್ಕೆ ಈ ರೀತಿಯ ಕಮಿಷನ್ ಮಾಡಿಕೊಂಡು ಕುಳಿತಿದ್ದೀರಿ, ಆರು ವಾರದಲ್ಲಿ ವರದಿ ನೀಡದಿದ್ದರೆ, ಹಣ ಬಿಡುಗಡೆಗೆ ನಾವೇ ನಿರ್ದೇಶನ ನೀಡಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ. ಸರಕಾರ ಈಗಲಾದರೂ ನಾಚಿಕೆ ಬಿಟ್ಟು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.


ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಮೇಲೆ ಒತ್ತಡ ಇದ್ದು, ಅವರ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ. ಹೀಗಾಗಿ ಅವರು ಸರ್ಕಾರದ ಪರವಾಗಿ ಮಾತನಾಡುತ್ತಿದ್ದಾರೆ. ಆ ರೀತಿ ಮಾತನಾಡುವಂತೆ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ನಿಲ್ಲಿಸಿಬಿಟ್ಟಿದ್ದಾರೆ, ಶೂನ್ಯವಾಗಿದೆ ಅಭಿವೃದ್ಧಿಯಾಗಿದೆ ಎಂದು ಹೇಳಿದರು.


ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಬಾಯಲ್ಲಿ ಹಸಿ ಸುಳ್ಳನ್ನು ಹೇಳಿಸಿದ್ದಾರೆ. ಹಿಂದಿನ ಸರ್ಕಾರದ ಸಾಧನೆಗಳನ್ನು ತನ್ನ ಸಾಧನೆ ಎಂದು ಸರ್ಕಾರ ಹೇಳಿಕೊಂಡಿದೆ. ಈ ಸರಕಾರ ಯಾವುದೇ ಸಾಧನೆ ಮಾಡಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ ಸೇರಿದಂತೆ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.


ಇದೇ ವೇಳೆ, ಲೋಕಸಭೆ ಟಿಕೆಟ್ ಹಂಚಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಫೆ. 17, 18 ರಂದು ದೆಹಲಿಯಲ್ಲಿ ರಾಷ್ಟ್ರೀಯ ಕೌನ್ಸಿಲ್ ಸಬೆ ನಡೆಯಲಿದೆ. ಆ ಸಬೆಯ ಬಳಿಕ ಟಿಕೆಟ್ ಹಂಚಿಕೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಜೆಡಿಎಸ್ ಜೊತೆಗೆ ಟಿಕೆಟ್ ಹಂಚಿಕೆ ವಿಚಾರವು ಅಂದು ಚರ್ಚೆ ಆಗಲಿದೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button