Latest

*25,000 ಕೋಟಿ ಬಾಕಿ ಬಿಲ್ ಉಳಿಸಿಕೊಂಡ ಸರ್ಕಾರ; ರಾಜ್ಯಾದ್ಯಂತ ಕಾಮಗಾರಿ ಸ್ಥಗಿತ ಎಚ್ಚರಿಕೆ ಕೊಟ್ಟ ಕೆಂಪಣ್ಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗುತ್ತಿಗೆದಾರರು ಹಾಗೂ ಸರ್ಕಾರದ ನಡುವಿನ ಸಮರ ಮುಂದುವರೆದಿದ್ದು, 25 ಸಾವಿರ ಕೋಟಿ ರೂಪಾಯಿ ಬಿಲ್ ಪಾವತಿಸದೇ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಂಪಣ್ಣ. ಸರ್ಕಾರ ಬಾಕಿ ಬಿಲ್ ಪಾವತಿಸುವವರೆಗೂ ಗುತ್ತಿಗೆದಾರರು ಸುಮ್ಮನಿರುವ ಪ್ರಶ್ನೆಯೇ ಇಲ್ಲ. ಸಾಕಷ್ಟು ಜನ ಗುತ್ತಿಗೆದಾರರು ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದರು.

ಕಳೆದ ಮೂರು ವರ್ಷಗಳಿಂದ ಬಿಲ್ ಪಾವತಿ ಮಾಡಿಲ್ಲ. ಪ್ರತಿಯೊಂದು ಇಲಾಖೆಯೂ ಬಾಕಿ ಉಳಿಸಿಕೊಂಡಿವೆ. ಲೋಕೋಪಯೋಗಿ ಇಲಾಖೆಯಿಂದ 4,000 ಕೋಟಿ ಬಾಕಿ ಪಾವತಿಸಬೇಕು. ನೀರಾವರಿ ಇಲಾಖೆ 8,000 ಕೋಟಿ ಬಾಕಿ ಉಳಿಸಿಕೊಂಡಿದೆ. ಬಿಬಿಎಂಪಿಯಿಂದ 3 ಸಾವಿರ ಕೋಟಿ ಬಾಕಿಯಿದೆ. ಒಟ್ಟು 25 ಸಾವಿರ ಕೋಟಿ ರೂಪಾಯಿ ಬಿಲ್ ಬಾಕಿಯಿದೆ. ತಕ್ಷಣ ಬಾಕಿ ಬಿಲ್ ಹಣ ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು.

ಬಾಕಿ ಮೊತ್ತ ಬಿಡುಗಡೆ, ಭ್ರಷ್ಟಾಚಾರ ನಿಯಂತ್ರಣ, ಜಿಎಸ್’ಟಿ ಗೊಂದಲ ಹಾಗೂ ಪ್ಯಾಕೇಜ್ ಪದ್ದತಿ ರದ್ದು ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರ ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ 18ರಂದು ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಗುತ್ತಿಗೆದಾರರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಎಂದರು.

ತಕ್ಷಣ ಸರ್ಕಾರ ಬಿಲ್ ಪಾವತಿ ಮಾಡದಿದ್ದಲ್ಲಿ ರಾಜ್ಯಾದ್ಯಂತ ಜನವರಿ 18ರಿಂದ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು. ಜಿಲ್ಲಾ, ತಾಲೂಕು ಕೇದ್ರಗಳಲ್ಲಿ ರಾಜ್ಯಾದ್ಯಂತ ಹೋರಾಟಗಳನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

*ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮೀಸಲಾತಿ ಹೆಚ್ಚಳ*

https://pragati.taskdun.com/siddaramaiahna-nayaki-samaveshapriyanka-gandhi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button