
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ವಿಧಾನಸೌಧದಲ್ಲಿ ಮಂಗಳವಾರ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು.
ಜಯದೇವ ಹೃದ್ರೋಗ ಆಸ್ಪತ್ರೆ ಎಂ.ಡಿ. ಡಾ. ಸಿ.ಎನ್. ಮಂಜುನಾಥ್ ಹಾಗೂ ನಿತಿನ್ ಕಾಮತ್ ಅವರಿಗೆ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಿರಾದ ಸ್ಪಟಿಕಪುರಿ ಮಠದ ನಂಜಾವದೂತ ಸ್ವಾಮೀಜಿ, ಚಂದ್ರಶೇಖರನಾಥ ಸ್ವಾಮೀಜಿ, ಸಚಿವರಾದ ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಶಾಸಕರಾದ ರಿಜ್ವಾನ್ ಅರ್ಶದ್, ವಿಶ್ವನಾಥ್, ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ, ಸದಸ್ಯರಾದ ನಾಗರಾಜ ಯಾದವ್, ಅ. ದೇವೇಗೌಡ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್ ವಿನಯ್, ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ಪ್ರಶಸ್ತಿ ಪುರಸ್ಕೃತರ ಕುಟುಂಬದವರು ಹಾಜರಿದ್ದರು.
ಇದಕ್ಕೂ ಮುನ್ನ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಎದುರು ಪುರಜ್ಯೋತಿ ಸ್ವೀಕರಿಸಿ ಕೆಂಪೇಗೌಡರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ