ಸಧ್ಯಕ್ಕೆ ಶಾಲೆಗಳನ್ನು ಪುನರಾರಂಭ ಮಾಡಬೇಡಿ: ಸಿದ್ದರಾಮಯ್ಯ ಮನವಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪುನರಾರಂಭ ಮಾಡುವ ಯೋಚನೆ ಬೇಡ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸರಣಿ ಟ್ವೀಟ್‌ಗ ಮೂಲಕ ಸರ್ಕಾರದ ನಿಲುವನ್ನು ಖಂಡಿಸಿರುವ ಸಿದ್ದರಾಮಯ್ಯ, ವಿದೇಶಗಳಲ್ಲಿ ಶಾಲೆಗಳ ಪುನರಾರಂಭದ ನಂತರ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿರುವುದು ವರದಿಯಾಗಿದೆ. ಬ್ರಿಟನ್, ಫ್ರಾನ್ಸ್, ಇಟಲಿ ಸೇರಿದಂತೆ ಬೇರೆ ದೇಶಗಳಲ್ಲಿ ಶಾಲೆಗಳನ್ನು ಪುನರಾರಂಭಿಸಿದ ನಂತರ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿರುವುದು ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ಎರಡು ತಿಂಗಳ ನಂತರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ಶಾಲೆಗಳ ಪುನರಾರಂಭದ ಬಗ್ಗೆ ಯೋಚನೆ ಮಾಡುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.

ಶಾಲೆಗಳನ್ನು ಜುಲೈ ತಿಂಗಳಲ್ಲಿ ಪುನರಾರಂಭಿಸುವ ಪ್ರಸ್ತಾವವನ್ನು ಶಿಕ್ಷಣ ಸಚಿವ ಸುರೇಶ್ ಮುಂದಿಟ್ಟಿದ್ದಾರೆ. ಇದರಿಂದ ಆತಂಕಕ್ಕೀಡಾಗಿರುವ ಪೋಷಕರು ಪ್ರಸ್ತಾವವನ್ನು ವಿರೋಧಿಸುತ್ತಿರುವುದನ್ನು ಸಿಎಂ ಬಿ.ಎಸ್ ಯಡಿಯೂರಪ್ಪ ಗಮನಿಸಬೇಕು ಎಂದಿದ್ದಾರೆ.

Home add -Advt

Related Articles

Back to top button