ಪ್ರಗತಿವಾಹಿನಿ ಸುದ್ದಿ; ಎರ್ನಾಕುಲಂ: ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ವಿದೇಶಿ ಕರೆನ್ಸಿ ಕಳ್ಳಸಾಗಣೆ ಆರೋಪ ಕೇಳಿಬಂದಿದೆ.
ಕೇರಳ ಚಿನ್ನ ಸಾಗಾಣೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದ ಕಸ್ಟಮ್ಸ್ ಆಯುಕ್ತ ಸುಮಿತ್ ಕುಮಾರ್, ಮುಖ್ಯ ಆರೋಪಿ ಸ್ವಪ್ನಾ ಸುರೇಶ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸೂಚನೆ ಮೇರೆಗೆ ವಿದೇಶಿ ಕರೆನ್ಸಿ ಕಳ್ಳಸಾಗಣಿಕೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ ಎಂದು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.
ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳ ಹೆಸರು ಕೂಡ ಈ ಪ್ರಕರಣದಲ್ಲಿ ಸಿಲುಕಿರುವ ಬಗ್ಗೆ ಕೇಳಿಬಂದಿದೆ. ಎರ್ನಾಕುಲಂನ ಮ್ಯಾಜಿಸ್ಟ್ರೇಟ್ ಮುಂದೆ ಸ್ವಪ್ನಾ ಸುರೇಶ್ ನೀಡಿದ ಗೌಪ್ಯ ಹೇಳಿಕೆಯಲ್ಲಿ ಈ ಆರೋಪಗಳಿವೆ ಎಂದು ಹೇಳಿದ್ದಾರೆ.
ಒಟ್ಟಾರೆ ಮುಂದಿನ ತಿಂಗಳು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ಪಿಣರಾಯಿ ವಿಜಯನ್ ವಿರುದ್ಧ ಕೇಳಿಬಂದಿರುವ ಈ ಆರೋಪ ರಾಜಕೀಯದಲ್ಲಿ ಹೊಸ ತಿರುವು ಸೃಷ್ಟಿಸುವ ಸಾಧ್ಯತೆಯಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ