Latest

ಅಧಿಕಾರ ದುರ್ಬಳಕೆ: ಉನ್ನತ ಶಿಕ್ಷಣ ಸಚಿವರ ರಾಜೀನಾಮೆ

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಕೇರಳದ ಉನ್ನತ ಶಿಕ್ಷಣ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಕೆ.ಟಿ.ಜಲೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಂಬಂಧಿಕರಿಗೆ ಸರ್ಕಾರಿ ನೌಕರಿ ನೀಡುವ ಮೂಲಕ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ಆರೋಪ ಹಿನ್ನೆಲೆಯಲ್ಲಿ ಸಚಿವ ಸ್ಥಾನದಲ್ಲಿ ಮುಂದುವರೆಯಲು ಅರ್ಹರಲ್ಲ ಎಂದು ಲೋಕಾಯುಕ್ತರು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಜಲೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆ.ಟಿ.ಜಲೀಲ್ ರಾಜೀನಾಮೆ ಪತ್ರ ಸ್ವೀಕರಿಸಿರುವ ಸಿಎಂ ಪಿಣರಾಯಿ ವಿಜಯನ್, ರಾಜ್ಯಪಾಲರಿಗೆ ರವಾನಿಸಿದ್ದಾರೆ.

Home add -Advt

2018ರಲ್ಲೇ ಜಲೀಲ್ ವಿರುದ್ಧ ಆರೋಪ ಕೇಳಿಬಂದಿತ್ತು. ತಮ್ಮ ಸಂಬಂಧಿಯಾದ ಟಿ.ಕೆ.ಅಬೀದ್ ಎಂಬುವವರ ವಿದ್ಯಾರ್ಹತೆ ಯಲ್ಲಿ ತಿದ್ದುಪಡಿ ಮಾಡಿ ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಪರೇಷನ್ ನಲ್ಲಿ ಕೆಲಸ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು.

ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಮಾತೃವಿಯೋಗ

Related Articles

Back to top button