Kannada NewsLatestNational

*ಕೇರಳದಲ್ಲಿ ಹಿಂಸಾಚಾರ: ಇಂದಿರಾ ಗಾಂಧಿ ಪ್ರತಿಮೆಗೆ ಹಾನಿ*

ಪ್ರಗತಿವಾಹಿನಿ ಸುದ್ದಿ: ಕೇರಳದ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾದ ಕೆಲವೇ ಹೊತ್ತಲ್ಲಿ  ಹಲವು ಜಿಲ್ಲೆಗಳಲ್ಲಿ  ರಾತ್ರಿ ಹಿಂಸಾಚಾರ ನಡೆದಿದೆ. 

ಕೇರಳದ ಕೋಯಿಕ್ಕೋಡ್ ಕಾಂಗ್ರೆಸ್‌ ಕಚೇರಿ ಮೇಲೆ ಸಿಪಿಎಂ ಕಾರ್ಯಕರ್ತರು ದಾಳಿ ಮಾಡಿದ ಆರೋಪ ಕೇಳಿಬಂದಿದ್ದು ಹಿಂಸಾಚಾರಕ್ಕೆ ಇದೇ ಕಾರಣ ಎನ್ನಲಾಗಿದೆ. ಈ ಘಟನೆಯ ಬೆನ್ನಲ್ಲೇ ನೂರಾರು ಜನರ ಗುಂಪು ಮಾರಕಾಸ್ತ್ರಗಳನ್ನು ಹಿಡಿದು ಕಾಂಗ್ರೆಸ್ ಕಚೇರಿಯತ್ತ ನುಗ್ಗಿ ದಾಂಧಲೆ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಕಚೇರಿ ಆವರಣದಲ್ಲಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪ್ರತಿಮೆಗೂ ಹಾನಿಯಾಗಿದೆ. ಈ ಕಾರಣಕ್ಕೆ ಉದ್ವಿಗ್ನತೆ ಸೃಷ್ಟಿಯಾಗಿದೆ.

ಡಿ.13 ರಂದು ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಯುಡಿಎಫ್ ವಿಜಯೋತ್ಸವಕ್ಕೆ ಸಿಪಿಎಂ ಕಾರ್ಯಕರ್ತರು ಅಡ್ಡಿಪಡಿಸಿದ್ದು ಈ ಸಂಘರ್ಷ ಉಂಟಾಗಲು ಕಾರಣ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಕೂಡಲೇ ಎಚ್ಚೆತ್ತ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.

Home add -Advt

Related Articles

Back to top button