Kannada NewsLatestPolitics

*ಕೇರಳ ಮಾಜಿ ಸಿಎಂ ಉಮನ್ ಚಾಂಡಿ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇರಳ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ಉಮನ್ ಚಾಂಡಿ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಅವರುಇಗೆ 70 ವರ್ಷ ವಯಸ್ಸಾಗಿತ್ತು.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಫೆಬ್ರವರಿ 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

Home add -Advt

ಉಮನ್ ಚಾಂಡಿ 2004ರಿಂದ 2006ವರೆಗೆ ಹಾಗೂ 2011ರಿಂದ 2016ರವರೆಗೆ ಕೇರಳ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ಉಮನ್ ಚಾಂಡಿ ನಿಧನಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ಕಂಬನಿ ಮಿಡಿದಿದ್ದಾರೆ. ಇದೇ ವೇಳೆ ಉಮನ್ ಚಾಂಡಿ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

Related Articles

Back to top button