
ಪ್ರಗತಿವಾಹಿನಿ ಸುದ್ದಿ: ಕೇರಳ ಮಾಜಿ ಮುಖ್ಯಮಂತ್ರಿ ವಿ.ಎಸ್.ಅಚ್ಯುತಾನಂದನ್ ವಿಧಿವಶರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು.
ವಿ.ಎಸ್ ಅಚ್ಯುತಾನಂದನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲವು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿದ್ದ ಅಚ್ಯುತಾನಂದನ್ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಇಂದು ಕೊನೆಯುಸಿರೆಳೆದಿದ್ದಾರೆ.
ಏಳು ಬಾರಿ ಶಾಸಕರಾಗಿದ್ದ ಅಚ್ಯುತಾನಂದನ್ ಅವರು 2006ರಿಂದ 2011ರವರೆಗೆ ಕೇರಳ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.