
ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಕೇರಳದ ಮೊದಲ ಮಂಗಳಮುಖಿ ರೆಡೀಯೋ ಜಾಕಿ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೊದಲ ತೃತೀಯಲಿಂಗಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಅನನ್ಯ ಕುಮಾರಿ ಅಲೆಕ್ಸ್ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕೊಚ್ಚಿಯ ಅಪಾರ್ಟ್ ಮೆಂಟ್ ಒಂದರಲ್ಲಿ ಪತ್ತೆಯಾಗಿದೆ.
ಅಪಾರ್ಟ್ ಮೆಂಟ್ ನ ಬೆಡ್ ರೂಮ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅನನ್ಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೇಕಪ್ ಆರ್ಟಿಸ್ಟ್ ಆಗಿಯೂ ಕೆಲಸ ಮಾಡಿದ್ದ ಅನನ್ಯ, ಕೇರಳದ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ನಿರೂಪಕಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಈ ಬಾರಿ ಕೇರಳ ಚುನಾವಣೆಯಲ್ಲಿ ವೆಂಗಾರಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು. ಆದರೆ ಜೀವಬೆದರಿಕೆ, ಮಾನಸಿಕ ಕಿರುಕುಳ ಹಿನ್ನೆಲೆಯಲ್ಲಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದರು.
2020ರಲ್ಲಿ ಲಿಗಪರಿವರ್ತನೆ ಸರ್ಜರಿಗೆ ಒಳಗಾಗಿದ್ದ 28 ವರ್ಷದ ಅನನ್ಯ, ತಾನು ಗಂಭೀರಸ್ವರೂಪದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದರು. ಲಿಂಗಪರಿವರ್ತನೆ ಬಳಿಕ ತಮಗೆ ಹೆಚ್ಚು ಸಮಯ ನಿಲ್ಲಲು ಸಾಧ್ಯವಾಗುತ್ತಿಲ್ಲ, ಕೆಲಸ ಮಾಡಲೂ ಕಷ್ಟವಾಗುತ್ತಿದೆ. ಸರ್ಜರಿ ಮಾಡುವಾಗಿನ ವೈದ್ಯರ ನಿರ್ಲಕ್ಷ್ಯದಿಂದಾದ ತಪ್ಪುಗಳಿಂದ ತಾನು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದರು ಎನ್ನಲಾಗಿದೆ.
ಅನನ್ಯ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಅನನ್ಯ ಸ್ನೇಹಿತರು ಪ್ರಕರಣವನ್ನು ತನಿಖೆಗೆ ಆದೇಶಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.
ಸಿಎಂ ಯಡಿಯೂರಪ್ಪ ಪರ ಸಿದ್ಧಗಂಗಾ ಶ್ರೀ ಬ್ಯಾಟಿಂಗ್
 
					 
				 
					 
					 
					 
					
 
					 
					 
					


