Latest

ಗೋಲ್ಡ್ ಸ್ಮಗ್ಲಿಂಗ್; ಸಿಎಂ ಮಾಜಿ ಕಾರ್ಯದರ್ಶಿ ಬಂಧನ

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಕೇರಳ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪಿಣರಾಯಿ ವಿಜಯನ್ ಅವರ ಮಾಜಿ ರಾಜಕೀಯ ಕಾರ್ಯದರ್ಶಿ ಎಂ.ಶಿವಶಂಕರ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಶಿವಶಂಕರ್ ಅವರನ್ನು ಬಂಧಿಸಿರುವ ಅಧಿಕಾರಿಗಳು ಕೋರ್ಟ್ ಮುಂದೆ ಹಾಜರುಪಡಿಸಿದ್ದು, ನ.26ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Home add -Advt

ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ 30 ಕೆಜಿ ಚಿನ್ನ ಸಾಗಾಟ ಪ್ರಕರಣ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣದ ಬೆನ್ನಲ್ಲೇ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಶಿವಶಂಕರ್ ಅವರನ್ನು ವಜಾ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಶಂಕರ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

 

Related Articles

Back to top button