Latest

ನಾನು ಪ್ರಾಣಾಪಯದಲ್ಲಿದ್ದೇನೆ ಎಂದು ನ್ಯಾಯಾಲಯಕ್ಕೆ ಮೊರೆಯಿಟ್ಟ ಸ್ವಪ್ನಾ

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಕೇರಳ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್, ತಮ್ಮ ಜೀವ ಅಪಾಯದಲ್ಲಿದೆ ಎಂದು ನ್ಯಾಯಾಲಯಕ್ಕೆ ಪತ್ರ ಬರೆದಿದ್ದಾರೆ.

ನನ್ನ ಮೇಲೆ ಕೆಲವರು ಒತ್ತಡ ಹಾಕುತಿದ್ದು, ಅವರಿಗೆ ಬೇಕಾದಂತೆ ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಇಲ್ಲವಾದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಹಾಗಾಗಿ ನನ್ನ ಪ್ರಾಣ ಅಪಾಯದಲ್ಲಿದೆ ಎಂದು ಸ್ವಪ್ನಾ ಸುರೇಶ್, ಅರ್ಥಿಕ ಅಪರಾಧ ಕುರಿತ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸ್ವಪ್ನಾ ಸುರೇಶ್ ಗೆ ಭದ್ರತೆ ಒಡಗಿಸುವಂತೆ ಜೈಲಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ.

Home add -Advt

Related Articles

Back to top button