Election NewsKannada NewsNationalPolitics

*ಕೇರಳ, ಅಸ್ಸಾಂ ಹಾಗೂ ಪುದುಚೆರಿ ವಿಧಾನಸಭಾ ಚುನಾವಣೆ: ಮತದಾನ ಆರಂಭ; ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆ*

ಪ್ರಗತಿವಾಹಿನಿ ಸುದ್ದಿ: ಇಂದು ಕರ್ನಾಟಕದ ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಬಾಗಲಕೋಟೆ ವಿಧನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದ್ದು, ಮತದಾನ ಆರಂಭವಾಗಿದೆ. ಇದೇ ವೇಳೆ ಕೇರಳ, ಅಸ್ಸಾಂ ಹಾಗೂ ಪುದುಚೆರಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿಯೂ ಮತದಾನ ಆರಂಭವಾಗಿದೆ.

ಕೇರಳದ 140 ಸ್ಥಾನಗಳು, ಅಸ್ಸಾಂನ 126 ಸ್ಥಾನಗಳು ಮತ್ತು ಪುದುಚೇರಿಯ ಎಲ್ಲಾ 30 ಸ್ಥಾನಗಳಿಗೆ ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದೆ. ಸಂಜೆ 5 ರವರೆಗೆ ಮತದಾನ ನಡೆಯಲಿದೆ. ಈ ಚುನಾವಣೆಯಲ್ಲಿ ಅಸ್ಸಾಂನಲ್ಲಿ 722 ಅಭ್ಯರ್ಥಿಗಳು ಮತ್ತು ಕೇರಳದಲ್ಲಿ 883 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.

ಕೇರಳದಲ್ಲಿ, 2.71 ಕೋಟಿ ಮತದಾರರು 883 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಇದರಲ್ಲಿ 1.32 ಕೋಟಿ ಪುರುಷರು, 1.39 ಕೋಟಿ ಮಹಿಳೆಯರು ಮತ್ತು 273 ಟ್ರಾನ್ಸ್‌ಜೆಂಡರ್ ಮತದಾರರು ಸೇರಿದ್ದಾರೆ. ಅಸ್ಸಾಂನಲ್ಲಿ ಒಟ್ಟು 2.50 ಕೋಟಿ ಮತದಾರರಿದ್ದು, ಅವರು 31,490 ಮತಗಟ್ಟೆಗಳಲ್ಲಿ ತಮ್ಮ ಮತ ಚಲಾಯಿಸಲಿದ್ದಾರೆ. ಮೇ 4 ರಂದು ಮತ ಎಣಿಕೆ ನಡೆಯಲಿದೆ.

Home add -Advt

ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಇಂದು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಪೋಸ್ಟ್ ಮೂಲಕ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ.

ಮೂರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪ್ರತ್ಯೇಕ ಪೋಸ್ಟ್‌ಗಳನ್ನು ಮಾಡಿದ್ದಾರೆ. ಅವರ ಒಂದು ಪೋಸ್ಟ್‌ನಲ್ಲಿ, ‘2026 ರ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕೇರಳದ ಜನರಿಗೆ ನಾನು ಮನವಿ ಮಾಡುತ್ತೇನೆ. ದಾಖಲೆಯ ಭಾಗವಹಿಸುವಿಕೆಯು ಕೇರಳದ ಪ್ರಜಾಪ್ರಭುತ್ವ ಮನೋಭಾವವನ್ನು ಮತ್ತಷ್ಟು ಬಲಪಡಿಸುತ್ತದೆ. ವಿಶೇಷವಾಗಿ ರಾಜ್ಯದ ಯುವಕರು ಮತ್ತು ಮಹಿಳೆಯರು ಮುಂದೆ ಬಂದು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವಂತೆ ನಾನು ಒತ್ತಾಯಿಸುತ್ತೇನೆ’ ಎಂದು ಉಲ್ಲೇಖಿಸಿದ್ದಾರೆ.

2026 ರ ಅಸ್ಸಾಂ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪ್ರಾರಂಭವಾಗುತ್ತಿರುವ ಈ ಸಂದರ್ಭದಲ್ಲಿ, ಅಸ್ಸಾಂನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸಬೇಕು. ರಾಜ್ಯದ ಯುವಕರು, ಮಹಿಳೆಯರು ಮತ್ತು ಮತದಾರರು ಉತ್ಸಾಹದಿಂದ ಭಾಗವಹಿಸಿ ಈ ಚುನಾವಣೆಯನ್ನು ಪ್ರಜಾಪ್ರಭುತ್ವ ಮತ್ತು ನಾಗರಿಕ ಕರ್ತವ್ಯದ ಹಬ್ಬವಾಗಿ ಪರಿವರ್ತಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಮತ್ತೊಂದು ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.


Related Articles

Back to top button