Kannada NewsLatestNational

*ಕೇರಳದಲ್ಲಿ ಸರಣಿ ಸ್ಫೋಟ: ಸಾವಿನ ಸಂಖ್ಯೆ ಮೂರಕ್ಕೇರಿಕೆ*

ಪ್ರಗತಿವಾಹಿನಿ ಸುದ್ದಿ; ಎರ್ನಾಕುಲಂ: ಕೇರಳದ ಎರ್ನಾಕುಲಂ ನಲ್ಲಿ ಕನ್ವೆನ್ಷನ್ ಹಾಲ್ ನಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಎರ್ನಾಕುಲಂ ನ ಕಲಮಸ್ಸೇರಿಯಲ್ಲಿ ಕ್ರೈಸ್ತ ಸಮುದಾಯದವರು ಪ್ರಾರ್ಥನೆ ಮಾಡುತ್ತಿದ್ದಾಗ ನಡೆದ ಬಾಂಬ್ ದಾಳಿ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಹಾಗೂ ಓರ್ವ ಬಾಲಕಿ ಸೇರಿ ಮೂವರು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳುಗಳಲ್ಲಿ 30 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 18 ಜನರಿಗೆ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೇರಳದ ಎರ್ನಾಕುಲಂನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಬೆನ್ನಲ್ಲೇ ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಆಯಾ ರಾಜ್ಯಗಳ ಗಡಿ ಪ್ರದೇಶ, ಜನನಿಬಿಡ ಪ್ರದೇಶಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button