
ಪ್ರಗತಿವಾಹಿನಿ ಸುದ್ದಿ; ಎರ್ನಾಕುಲಂ: ಕನ್ವೆನ್ಷನ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯೇ ಭಾರಿ ಸ್ಫೋಟ ಸಂಭವಿಸಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಕೇರಳದ ಎನಾಕುಲಂ ನಲ್ಲಿ ನಡೆದಿದೆ.
ಎರ್ನಾಕುಲಂ ನ ಕಲಮೆಸ್ಸೇರಿ ಕನ್ವೆನ್ಷನ್ ಹಾಲ್ ನಲ್ಲಿ ಈ ದುರಂತ ಸಂಭವಿಸಿದೆ. ಕಾರ್ಯಕ್ರಮವೊಂದರಲ್ಲಿ 2000ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಈ ವೇಳೆ ಏಕಾಏಕಿ ಸರಣಿ ಸ್ಫೊಟ ಸಂಭವಿಸಿದ್ದು, ಜನರು ದಿಕ್ಕಾಪಾಲಾಗಿ ಓಡಿದ್ದಾರೆ.
ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, 24 ಜನರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಸ್ಫೋಟಕ್ಕೆ ಕಾರಣವೇನು ಎಂಬುದನ್ನು ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ