*ಮಾಜಿ ಮುಖ್ಯಮಂತ್ರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಕೇರಳ ಮಾಜಿ ಮುಖ್ಯಮಂತ್ರಿ, ಸಿಪಿಐ(ಎಂ) ಮುಖಂಡ ವಿ.ಎಸ್. ಅಚ್ಚುತಾನಂದ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶತಾಯುಷಿ (101 ವರ್ಷ)ಯಾಗಿರುವ ಅಚ್ಚುತಾನಂದ್ ಅವರು ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದೀಗ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದು, ಸದ್ಯ ಅವರ ಆರೋಗ್ಯ ಸ್ಥಿತವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. *ಫಾಲ್ಸ್ ನೋಡಲು ಹೋಗಿ ಕಾಲು ಜಾರಿಬಿದ್ದ ಯುವಕ ನಾಪತ್ತೆ*