ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಹಲವು ರಾಜ್ಯಗಳು ಅಂತಿಮ ಅಸ್ತ್ರವಾಗಿ ಲಾಕ್ ಡೌನ್ ಮೊರೆ ಹೋಗುತ್ತಿದ್ದು, ಪಕ್ಕದ ರಾಜ್ಯ ಕೇರಳದಲ್ಲಿಯೂ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಮೇ 8ರಿಂದ 16ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಿ ಸಿಎಂ ಪಿಣರಾಯಿ ವಿಜಯನ್ ಸರ್ಕಾರ ಕಠಿಣ ಕ್ರಮದ ಆದೇಶ ಹೊರಡಿಸಿದೆ. ಈಗಗಾಲೇ ಕೇರಳದಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ರಾತ್ರಿ 9ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಕೂಡ ಜಾರಿಯಲ್ಲಿದೆ. ಆದರೂ ಸೋಂಕು ಪರಿಣಾಮಕಾರಿಯಾಗಿ ನಿಯಂತ್ರಕ್ಕೆ ಬಾರದ ಕಾರಣ ಸರ್ಕಾರ ಇದೀಗ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ.
ಪಕ್ಕದ ಕೇರಳ ರಾಜ್ಯದಲ್ಲಿಯೂ ಸರ್ಕಾರ ಲಾಕ್ ಡೌನ್ ಜಾರಿ ಮಾಡಿ ಕೋವಿಡ್ ತಡೆಗೆ ಕಟ್ಟುನಿಟ್ಟಿನ ಕ್ರಮ ಅನುಸರಿಸಿರುವ ಬೆನ್ನಲ್ಲೇ ಕೊರೊನಾ ಸೋಂಕು ಕೈಮೀರಿರುವ ಕರ್ನಾಟಕದಲ್ಲಿಯೂ ಲಾಕ್ ಡೌನ್ ಜಾರಿ ಮಾಡಬೇಕು ಎಂಬುದು ಹಲವರ ಸಲಹೆಯಾಗಿದೆ.
ಮತ್ತೊಬ್ಬ ಮಾಜಿ ಸಚಿವ ಕೊರೊನಾಗೆ ಬಲಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ