
ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಏಪ್ರಿಲ್ 6ರಂದು ಕೇರಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಈ ನಡುವೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದ ಕಾರಣ ಬೇಸತ್ತ ಕಾಂಗ್ರೆಸ್ ಮಹಿಳಾ ಮುಖ್ಯಸ್ಥರೊಬ್ಬರು ತಲೆ ಬೋಳಿಸಿಕೊಂಡು ಪ್ರತಿಭಟನೆ ನಡೆಸಿದ್ದಾರೆ.
ಎಟ್ಟುಮಣ್ಣೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕೇರಳ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಲತಿಕಾ ಸುಭಾಷ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಇದರಿಂದ ಬೇಸತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಲತಿಕಾ ಪಕ್ಷದ ಕಚೇರಿ ಮುಂಭಾಗದಲ್ಲಿ ಕುಳಿತುಕೊಂಡು ತಲೆ ಬೋಳಿಸಿಕೊಂಡು ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿರುವ ಲತಿಕಾ ಸುಭಾಷ್, ಪಟ್ಟಿಯಲ್ಲಿ ಮಹಿಳಾ ಅಭ್ಯರ್ಥಿಗಳ ಕೊರತೆಯಿದೆ. ನಾನು ಟಿಕೆಟ್ ಆಕಾಂಕ್ಷಿಯಾಗಿದ್ದೆ ಆದರೂ ಟಿಕೆಟ್ ನಿರಾಕರಿಸಲಾಗಿದೆ. ಇದರಿಂದ ನೊಂದು ನನ್ನ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಹಾಗಂತೆ ಬೇರೆ ಯಾವುದೇ ಪಕ್ಷಕ್ಕೂ ಸೇರುವ ಉದ್ದೇಶವಿಲ್ಲ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ