
ಪ್ರಗತಿವಾಹಿನಿ ಸುದ್ದಿ: ಕೇರಳಂ ವಿಧಾನಸಭೆ ಅಧಿವೇಶನದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಕನ್ನಡದಲ್ಲಿ ಪ್ರಮಾಣವಚ್ನ ಸ್ವೀಕರಿಸುವ ಮೂಲಕ ಗಮನ ಸೆಳೆದಿದ್ದಾರೆ.
ಇಂದಿನಿಂದ ಕೇರಳಂ ವಿಧಾನಸಭೆ ಅಧಿವೇಶ ಆರಂಭವಾಗಿದ್ದು, ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಮಂಜೇಶ್ವರ ಶಾಸಕ ಅಶ್ರಫ್ ಕನ್ನಡದಲ್ಲಿ ಪ್ರಮಣವಚ್ನ ಸ್ವೀಕರಿಸಿದ್ದಾರೆ.
ಜನಪರ ಕಾಳಜಿ ಮತ್ತು ನಿರೀಕ್ಷೆಗಳ ಸಾಕ್ಷಾತ್ಕಾರದ ಸಂಕಲ್ಪದೊಂದಿಗೆ ಸಂವಿಇಧಾನ ಮೌಲ್ಯಗಳನ್ನು ಎತ್ತಿಹಿಡಿದು, ಹದಿನಾರನೇ ಕೇರಳಂ ವಿಧಾನಸಭೆಯ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಂಡೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




