Latest

ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆ

ಪ್ರಗತಿವಾಹಿನಿ ಸುದ್ದಿ; ತಿರುವಂತಪುರಂ: ಹೆಚ್ಚುತ್ತಿರುವ ಕೊರೊನಾ ಸೋಂಕಿನ ನಡುವೆ ಸಾಂಕ್ರಾಮಿಕ ರೋಗಗಳು ಉಲಭಣಗೊಳ್ಳುತ್ತಿದ್ದು, ದೇಶದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ.

ಕೇರಳದಲ್ಲಿ ಎರಡನೇ ಮಂಕಿಪಾಕ್ಸ್ ಪ್ರಕರಣ ದೃಢಪಟ್ಟಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.

ದುಬೈನಿಂದ ಜುಲೈ 13ರಂದು  31 ವರ್ಷದ ವ್ಯಕ್ತಿ ಮಂಗಳೂರಿನ ಏರ್ ಪೋರ್ಟ್ ಗೆ ಬಂದಿದ್ದರು. ಮಂಕಿಪಾಕ್ಸ್ ರೋಗ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಯ ಸ್ಯಾಂಪಲ್ ನ್ನು ಪುಣೆಯ ವೈರಾಲಜಿ ಲ್ಯಾಬ್ ಗೆ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದ್ದು, ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ

ಸೋಂಕಿತರನ್ನು ಕಣ್ಣೂರಿನ ಸರ್ಕಾರಿ ಮೆಡಿಕಲ್ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೇರಳದಲ್ಲಿ ಕೆಲ ದಿನಗಳ ಹಿಂದಷ್ಟೇ ಯುಎಇ ಯಿಂದ ಬಂದಿದ್ದ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ಪತ್ತೆಯಾಗಿತ್ತು. ಈ ಮೂಲಕ ದೇಶದಲ್ಲೇ ಮೊದಲ ಮಂಕಿಪಾಕ್ಸ್ ಪ್ರಕರನ ಇದಾಗಿತ್ತು. ಇದೀಗ ಕೇರಳದಲ್ಲಿ ಎರಡನೇ ಮಂಕಿಪಾಕ್ಸ್ ಸೋಂಕು ಪತ್ತೆ ಹಿನ್ನೆಲೆಯಲ್ಲಿ ಐದು ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
17 ವರ್ಷದ ಯುವತಿ ಮೇಲೆ ಸಬ್ ಇನ್ಸ್ ಪೆಕ್ಟರ್ ಅತ್ಯಾಚಾರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button