ಪ್ರಗತಿವಾಹಿನಿ ಸುದ್ದಿ: ದೇವಸ್ಥಾನದಲ್ಲಿ ಉತ್ಸವದ ವೇಳೆ ಆನೆಯೊಂದು ದಾಳಿ ನಡೆಸಿದ ಪರಿಣಾಮ 17 ಜನರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಕೇರಳದ ಮಲ್ಲಪುರಂ ನಲ್ಲಿ ನಡೆದಿದೆ.
ದೇವಸ್ಥಾನದಲ್ಲಿ ಪುತಿಯಂಗಡಿ ಉತ್ಸವದ ವೇಳೆ ಈ ಅವಘಡ ಸಂಭವಿಸಿದೆ. ದೇವಸ್ಥಾನದಲ್ಲಿ ಉತ್ಸವದ ವೇಳೆ 5 ಆನೆಗಳು ಸಾಲು ಗಟ್ಟಿ ನಿಂತಿದ್ದವು. ಈ ವೇಳೆ ಒಂದು ಆನೆ ಏಕಾಏಕಿ ದಾಳಿ ನಡೆಸಿದೆ. ಮದವೇರಿದ ಆನೆ ಅಟ್ಟಹಾಸಕ್ಕೆ 17 ಜನರು ಗಾಯಗೊಂಡಿದ್ದಾರೆ. ಓರ್ವನ ಶಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ