LatestNational

*ವಯನಾಡ್ ಭೂ ಕುಸಿತ; ಸಾವಿನ ಸಂಖ್ಯೆ 330ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ; ದೇವರನಾಡು ಎಂದೇ ಖ್ಯಾತಿ ಪಡೆದಿದ್ದ ಕೇರಳದಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಭೂಕುಸಿತ ರಣಭೀಕರತೆಯನ್ನು ಸೃಷ್ಟಿಸಿದೆ. ವಯನಾಡ್ ನಲ್ಲಿ ಸಂಭವಿಸಿದ ಸರಣಿ ಭೂ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 330ಕ್ಕೆ ಏರಿಕೆಯಾಗಿದೆ.

ವಯನಾಡ್ ಭೂ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಲೇ ಇದೆ. ಈವರೆಗೆ 29 ಮಕ್ಕಳು ಸೇರಿದಂತೆ 330 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಣ್ಮರೆಯಾದವರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಮಣ್ಣಿನ ಅವಶೇಷಗಳಡಿ ಸಿಲುಕಿದವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. 200ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಯನಾಡ್ ಭೂ ಕುಸಿತ ಸ್ಥಳಗಳಲ್ಲಿ ಇನ್ನೂ ಬದುಕಿರುವವರು ವಿರಳ. ಅವಶೇಷಗಳಡಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Home add -Advt

Related Articles

Back to top button