ನೂರಕ್ಕೂ ಹೆಚ್ಚುಜನ ಅವಶೇಷಗಳಡಿ ಸಿಲುಕಿರುವ ಶಂಕೆ
ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತ ದುರಂತದ ಬೆನ್ನಲ್ಲೇ ಭಾರಿ ಮಳೆಯಿಂದಾಗಿ ಕೇರಳದ ವಯನಾಡಿನಲ್ಲಿ ಮೂರು ಕಡೆ ಭೀಕರ ಭೂ ಕುಸಿತ ಸಂಭವಿಸಿದ್ದು, 15 ಜನರು ಸಾವನ್ನಪ್ಪಿದ್ದಾರೆ.
ಮಣ್ಣಿನ ಅವಶೇಷಗಳಡಿ 100ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ.
ಇಂದು ಮುಂಜಾನೆ ಈ ದುರಂತ ಸಂಭವಿಸಿದೆ. ನಸುಕಿನ ಜಾವ 2 ಗಂಟೆಸುಮಾರಿಗೆ ಮೊದಲ ಭೂ ಕುಸಿತ ಸಂಭವಿಸಿದೆ. ಬಳಿಕ ಬೆಳಗಿನ ಜಾವ 4:10ರ ಸುಮಾರಿಗೆ ಮತ್ತೊಂದು ಭೂ ಕುಸಿತ ಸಂಭವಿಸಿದೆ. ಇದಾದ ಬಳಿಕ ಮತ್ತೊಂದು ಕಡೆ ಭೂ ಕುಸಿತ ಸಂಭವಿಸಿದೆ. ವಯನಾಡ್ ಜಿಲ್ಲೆಯಲ್ಲಿ ಮೂರು ಕಡೆ ಭೂ ಕುಸಿತ ಸಂಭವಿಸಿದೆ. ಪ್ರವಾಹದಂತೆ ನೀರು ಹರಿದು ಬರುತ್ತಿದ್ದು, ನೀರಿನ ರಭಸಕ್ಕೆ, ಮನೆ, ಅಂಗಡಿಗಳು, ವಾಹನಗಳು ಕೊಚ್ಚಿ ಹೋಗಿವೆ
ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್ ಡಿ ಆರ್ ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. ಈವರೆಗೆ 16 ಜನರನ್ನು ರಕ್ಷಿಸಲಾಗಿದೆ. ಆದರೆ 400 ಕುಟುಂಬಗಳು ಅತಂತ್ರವಾಗಿವೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ