
ಪ್ರಗತಿವಾಹಿನಿ ಸುದ್ದಿ; ಇಡುಕ್ಕಿ: ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ ಯುವಕನ ಮೇಲೆ ಮಹಿಳೆ ಆಸಿಡ್ ದಾಳಿ ನಡೆಸಿದ್ದು, ಆರೋಪಿ ಮಹಿಳೆಯನ್ನು ತಿರುವನಂತಪುರಂ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
28 ವರ್ಷದ ಯುವಕ ಅರುಣ್ ಕುಮಾರ್ ಆಸಿಡ್ ದಾಳಿಗೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಮೇಲೆ ಆಸಿಡ್ ಎರಚಿದ 35 ವರ್ಷದ ಮಹಿಳೆ ಷಿಬಾಳನ್ನು ಪೊಲೀಸರು ಬಂಧಿಸಿದ್ದಾರೆ.
ಫೇಸ್ ಬುಕ್ ನಲ್ಲಿ ಮಹಿಳೆಯ ಪರಿಚಯ ಮಾಡಿಕೊಂಡ ಯುವಕ ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದು, ಕೆಲಸ ಮಯದ ಬಳಿಕ ಇಬ್ಬರ ಸ್ನೇಹ ಪ್ರೀತಿಗೆ ತಿರುಗಿದೆ. ಇಬ್ಬರು ಮದುವೆಯಾಗಲು ಯೋಚಿಸಿದ್ದರು. ಆದರೆ ಮಹಿಳೆಗೆ ಅದಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ ಎಂಬ ವಿಷಯ ಯುವಕನಿಗೆ ತಡವಾಗಿ ಗೊತ್ತಾಗಿದೆ. ಮಹಿಳೆಗೆ ಮದುವೆಯಾಗಿರುವ ವಿಷಯ ತಿಳಿಯುತ್ತಿದ್ದಂತೆ ಯುವಕ ಆಕೆಯಿಂದ ದೂರವಾಗಲು ನಿರ್ಧರಿಸಿದ್ದಾನೆ ಎನ್ನಲಾಗಿದೆ.
ಅಲ್ಲದೇ ಮಹಿಳೆಯನ್ನು ಮದುವೆಯಾಗಲು ಯುವಕ ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ತಿರುವಂತಪುರಂ ನಲ್ಲಿ ಯುವಕನ ಮೇಲೆ ಆಸಿಡ್ ದಾಳಿ ನಡೆಸಿದ್ದಾಳೆ. ಯುವಕನ ಮುಖ ಹಾಗೂ ಕುತ್ತಿಗೆ ಭಾಗ ಸಂಪೂರ್ಣ ಸುಟ್ಟುಹೋಗಿದೆ. ಅಲ್ಲದೇ ಯುವಕ ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿದ್ದಾನೆ. ಘಟನೆಯಲ್ಲಿ ಮಹಿಳೆಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಆಸಿಡ್ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಯುವಕನ ದೂರಿನ ಅನ್ವಯ ಇದೀಗ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಡ್ರಗ್ಸ್ ಪ್ರಕರಣ: ಪ್ರತಿಷ್ಠಿತ ಕಾಲೇಜಿನ 5 ವಿದ್ಯಾರ್ಥಿಗಳ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ