EducationPolitics

*ಶಾಲೆಯ ಆವರಣದಲ್ಲಿ ತಾವೇ ಬೆಳೆದ ತರಕಾರಿಗಳನ್ನು ಸಿಎಂ ಸಿದ್ದರಾಮಯ್ಯಗೆ ನೀಡಿ ಖುಷಿ ಪಟ್ಟ ಕೊತ್ಲೂರು ಶಾಲೆ ಮಕ್ಕಳು*

ಪ್ರಗತಿವಾಹಿನಿ ಸುದ್ದಿ: ಬೆಳ್ತಂಗಡಿ ತಾಲ್ಲೂಕಿನ ಕೊತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ತಾವೇ ಬೆಳೆಸಿದ ತರಕಾರಿ ಬೆಳೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ನೀಡಿ ಸಂಭ್ರಮಿಸಿದರು. ಮುಖ್ಯಮಂತ್ರಿಗಳು ಮಕ್ಕಳನ್ನು ಶ್ಲಾಘಿಸಿ ಶಾಲೆಗೆ ಎರಡು ಕಂಪ್ಯೂಟರ್ ಗಳನ್ಮು ಉಡುಗೊರೆಯಾಗಿ ನೀಡಿದರು.

ಶಾಲೆಯ ಶಿಕ್ಷಕ ವೃಂದ ಮಕ್ಕಳ ಜೊತೆಗೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಬೆಳ್ತಂಗಡಿಯ ಕಾಂಗ್ರೆಸ್ ಯುವ ನಾಯಕ ರಕ್ಷಿತ್ ಶಿವರಾಮ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button