Latest

ಗೋಕರ್ಣದಲ್ಲಿ ಗಾಂಜಾ ವಶ

ಪ್ರಗತಿವಾಹಿನಿ ಸುದ್ದಿ, ಗೋಕರ್ಣ :- ಅಕ್ರಮವಾಗಿ ಸಾಗಾಟ ಮಾಡುತಿದ್ದ 1ಕೆ.ಜಿ 107 ಗ್ರಾಮ್ ತೂಕದ 20 ಸಾವಿರ ಮೌಲ್ಯದ ಗಾಂಜಾವನ್ನು ಗೋಕರ್ಣ ಠಾಣೆ ಪಿ.ಎಸ್.ಐ ನವೀನ್ ನೇತೃತ್ವದ ತಂಡ ಬುಧವಾರ ದಾಳಿ ನಡೆಸಿ ವಶಕ್ಕೆ ಪಡೆದಿದೆ.
ತಾಳಮಕ್ಕಿ ಗ್ರಾಮದ ಕೃಷ್ಣ ಗೌಡ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಒಟ್ಟು   62,170 ರುಪಾಯಿ ಮೌಲ್ಯದ ಗಾಂಜಾ ಹಾಗೂ ವಾಹನ ವಶಕ್ಕೆ ಪಡೆದಿದೆ. ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರವಾಸಿಗರ ಸ್ವರ್ಗ ಗೋಕರ್ಣ ಭಾಗದಲ್ಲಿ ಇತ್ತೀಚೆಗೆ ಗಾಂಜಾ ಸಾಗಾಟ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೆ ಗೋಕರ್ಣ ಪೊಲೀಸರು ಕಾರ್ಯಾಚರಣೆ ನಡೆಸುತಿದ್ದು ಗಾಂಜಾ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button