Karnataka News

*ಹೆಚ್ಚುತ್ತಿದೆ ಮಂಗನ ಕಾಯಿಲೆ; ಮೂರು ತಾಲೂಕುಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ.

ಆರಂಭದಲ್ಲಿ ಕೊಪ್ಪ ತಾಲೂಕಿನ ಖಾಂಡ್ಯ ಗ್ರಾಮದ ಯುವಕನಲ್ಲಿ ಕಾಣಿಸಿಕೊಂಡಿದ್ದ ಕೆ ಎಫ್ ಡಿ-ಮಂಗನ ಕಾಯಿಲೆ ಸೋಂಕು ಇದೀಗ 7 ಜನರಲ್ಲಿ ಪತ್ತೆಯಾಗಿದೆ. ಅದರಲ್ಲಿಯೂ ಎನ್ ಆರ‍್ ಪುರ ತಾಲೂಕಿನ ಮೇಲ್ಪಾರ್ ಗ್ರಾದಲ್ಲೇ ಮೂವರಲ್ಲಿ ಸೋಂಕು ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ, ಎನ್ ಆರ್ ಪುರ, ಕೊಪ್ಪ, ಶೃಂಗೇರಿ ತಾಲೂಕುಗಳಲ್ಲಿ ಅಲರ್ಟ್ ಘೋಷಿಸಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆ ಎಫ್ ಡಿ ಪೀಡಿತರಿಗಾಗಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button