ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಯಾವಾಗ ಬಿಡುಗಡೆಯಾಗಲಿದೆ ಎಂದು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಇಂದು ಗುಡ್ ನ್ಯೂಸ್ ಒಂದು ಹೊರಬೀಳಲಿದೆ. ಇಂದು ಸಂಜೆ ಕೆಜಿಎಫ್-2 ಬಿಡುಗಡೆ ದಿನಾಂಕ ಘೋಷಿಸುವುದಾಗಿ ಚಿತ್ರತಂಡ ತಿಳಿಸಿದೆ.
ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಈ ಕುರಿತು ಟ್ವೀಟ್ ಮಾಡಿದ್ದು, ಇಂದು ಸಂಜೆ 6:32ಕ್ಕೆ ಕೆಜಿಎಫ್-2 ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.
ಈ ಹಿಂದೆ ಕೆಜಿಎಫ್-2 ಸಿನಿಮಾ ಅಕ್ಟೋಬರ್ 23ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಅಧಿಕೃತ ಮಾಹಿತಿ ನೀಡಿತ್ತು. ಆದರೆ ಕೊರೊನಾ ಕಾರಣದಿಂದಾಗಿ ಸಿನಿಮಾ ಬಿಡುಗಡೆ ದಿನಾಂಕ ವಿಳಂಬವಾಯಿತು. ಇದರಿಂದ ಅಭಿಮಾನಿಗಳಿಗೆ ಕೊಂಚ ನಿರಾಸೆಯಾಗಿತ್ತು. ಕೆಜಿಎಫ್ -2 ಯಾವಾಗ ಬಿಡುಗಡೆಯಾಗಲಿದೆ ಎಂದು ಕಾಯುತ್ತಿದ್ದ ಸಿನಿ ರಸಿಕರಿಗೆ ಇಂದು ಸಂಜೆ ಸಿನಿಮಾ ರಿಲೀಸ್ ದಿನಾಂಕ ಅನೌನ್ಸ್ ಸಂತಸ ತಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ