Latest

ಕೆಜಿಎಫ್-2 ಟ್ರೇಲರ್ ರಿಲೀಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿರುವ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗಿದೆ.

ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಕೆಜಿಎಫ್ -2 ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಬಾಲಿವುಡ್ ನಿರ್ದೇಶಕ, ಖ್ಯಾತ ನಿರೂಪಕ ಕರಣ್ ಜೋಹಾರ್ ಕಾರ್ಯಕ್ರಮ ನಿರೂಪಿಸಿದರು.

ಟ್ರೇಲರ್ ನಲ್ಲಿ ಇಡೀ ಸಿನಿಮಾದ ಒಂದು ಝಲಕ್ ತೋರಿಸಲಾಗಿದೆ. ಇನ್ನು ಚಿತ್ರದ ಟ್ರೇಲರ್ ಕನ್ನಡದಲ್ಲಿ ಮಾತ್ರವಲ್ಲ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿದೆ. ಕನ್ನಡದಲ್ಲಿ ಶಿವಣ್ಣ ಟ್ರೇಲರ್ ಬಿಡುಗಡೆ ಮಾಡಿದ್ದರೆ ಕೆಜಿಎಫ್-2 ತೆಲುಗಿನ ಟ್ರೇಲರ್ ನ್ನು ನತ ರಾಮ್ ಚರಣ್ ತೇಜ, ತಮಿಳಿನಲ್ಲಿ ಸೂರ್ಯ, ಮಲಯಾಳಂ ನಲ್ಲಿ ಪೃಥ್ವಿರಾಜ್ ಹಾಗೂ ಹಿಂದಿಯಲ್ಲಿ ಫರಾನ್ ಅಖ್ತರ್ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಭಾರತೀಯ ಚಿತ್ರರಂಗದಲ್ಲಿ ಕೆಜಿಎಫ್ ಹವಾ ಆರಂಭವಾಗಿದೆ.

ಕೆಜಿ ಎಫ್-2 ನಲ್ಲಿ ಬೃಹತ್ ತಾರಾಗಣವಿದ್ದು ಯಶ್ ಗೆ ನಾಯಕಿಯಾಗಿ ಶ್ರೀನಿಧಿ ಶೆಟ್ಟಿ ಅಭಿನಯಿಸಿದ್ದರೆ, ಅಧೀರನ ಪಾತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್, ನಟಿ ರವೀನಾಟಂಡನ್, ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವರು ಅಭಿನಯಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button