Karnataka NewsPolitics

*ಪ್ರಜ್ವಲ್ ರೇವಣ್ಣ ಜೆಡಿಎಸ್ ನಿಂದ ಅಮಾನತು*

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನನ್ನು ಜೆಡಿಎಸ್ ನಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಹಿರಿಯ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

Home add -Advt

ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ, ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ಹಿನ್ನೆಲೆಯಲ್ಲಿ ಪ್ರಜ್ವಲ್ ನನ್ನು ಪಕ್ಷದಿಂದ ಅಮಾನತು ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಶಿಫಾರಸು ಮಾಡಲಾಗುವುದು ಎಂದರು.

ಮಹಿಳೆಯರಿಗೆ ಅಪಮಾನವಾಗುವ ಕೆಲಸವಾಗಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ನನ್ನು ಪಕ್ಷದಿಂದ ಅಮನಾತು ಮಾಡುವ ನಿರ‍್ನಯವನ್ನು ಕೋರ್ ಕಮಿಟಿ ಸಭೆಯಲ್ಲಿ ಕೈಗೊಳ್ಳಳ್ಳಗಿದ್ದು, ಅಮಾನತುಗೊಳಿಸಲು ದೇವೇಗೌಡರಿಗೆ ಶಿಫಾರಸು ಮಾಡಲಾಗುವುದು ಎಂದು ಹೇಳಿದರು.

ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕರು ಉಪಸ್ಥಿತರಿದ್ದರು.


Related Articles

Back to top button