Latest

ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಜಿಎಫ್ ಬಾಬು ಬೆಂಗಳೂರಿನ ನಿವಾಸ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬೆಂಗಳೂರಿನ ವಸಂತ ನಗರದಲ್ಲಿರುವ ಕೆಜಿಎಫ್ ಬಾಬು ಅವರ ನಿವಾಸಕ್ಕೆ ಬೆಳಿಗ್ಗೆ 7 ಗಂಟೆಗೆ ನಾಲ್ಕು ಇನೋವಾ ಕಾರುಗಳಲ್ಲಿ ಬಂದಿಳಿದ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಸಿಆರ್ ಪಿಎಸ್ ಭದ್ರತೆಯಲ್ಲಿ ಶೋಧ ನಡೆಸಿದ್ದಾರೆ. ಬಾಬು ಒಡೆತನದ ರುಕ್ಸಾನಾ ಪ್ಯಾಲೇಸ್ ಮೇಲೂ ದಾಳಿ ನಡೆಸಲಾಗಿದೆ.

Home add -Advt

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸೋಲನುಭವಿಸಿದ್ದ ಕೆಜಿ ಎಫ್ ಬಾಬು ಉಮ್ರಾ ಡೆವಲಪರ್ಸ್ ಕಂಪನಿ ಮಾಲೀಕರಾಗಿದ್ದು, ಸ್ಕ್ರಾಪ್ ಉದ್ಯಮದಲ್ಲಿ ಹೆಸರುವಾಸಿಯಾಗಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೂಡ ಆಗಿದ್ದಾರೆ ಎಂದು ತಿಳಿದುಬಂದಿದೆ.
MES ಪುಂಡರಿಗೆ ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ

Related Articles

Back to top button