Latest

ಕೆಜಿಎಫ್-2 ಟ್ರೇಲರ್ ರಿಲೀಸ್ ಗೆ ಡೇಟ್ ಫಿಕ್ಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಚಿತ್ರದ ಟ್ರೇಲರ್ ರಿಲೀಸ್ ಗೆ ಕೊನೆಗೂ ಮುಹೂರ್ತ್ ಫಿಕ್ಸ್ ಆಗಿದೆ.

ಟ್ರೇಲರ್ ಬಿಡುಗಡೆ ಕುರಿತು ನಿರ್ದೇಶಕ ಪ್ರಶಾಂತ್ ನೀಲ್ ಟ್ವೀಟ್ ಮಾಡಿದ್ದು, ಮಾರ್ಚ್ 27ರಂದು ಕೆಜಿಎಫ್-2 ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಿದ್ದ ಕೆಜಿಎಫ್ ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿದ್ದು, ದೇಶಾದ್ಯಂತ ರಾಕಿಂಗ್ ಸ್ಟಾರ್ ಅಭಿಮಾನಿಗಳು ಕೆಜಿಎಫ್ ಚಾಪ್ಟರ್ 2 ಗಾಗಿ ಕಾಯುತ್ತಿದ್ದಾರೆ. ಕೆಜಿಎಫ್-2 ಚಿತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್, ನಟಿ ರವೀನಾ ಟಂಡನ್ ಸೇರಿದಂತೆ ಹಲವು ಘಟಾನುಘಟಿ ನಟ-ನಟಿಯರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವುದು ವಿಶೇಷ.
ರಾಯಬಾರ ಕಚೇರಿ ವಾರ್ನಿಂಗ್: ಜೀವ ಉಳಿಸಿಕೊಳ್ಳಲು ಭಾರತೀಯ ವಿದ್ಯಾರ್ಥಿಗಳ ಪರದಾಟ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button