ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪಿಐ ನಂದಿಶ್ವರ್ ಕುಂಬಾರ್ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ.
ಬೆಳಗಾವಿ ಅಶೋಕ ನಗರದ ಹೂವಿನ ಮಾರ್ಕೆಟ್ ಬಳಿ ಅನಧಿಕೃತವಾಗಿ ಹೆರಾಯಿನ್ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಖದೀಮನನ್ನು ಬಂಧಿಸಲಾಗಿದೆ.
ಬೆಳಗಾವಿ ನಗರದ ಬಸವನಗಲ್ಲಿಯ ಬಾಗೇಶ ನಂದಾಳಕರ ಬಂಧಿತ ವ್ಯಕ್ತಿ, ಬೆಳಗಾವಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಹೆರಾಯಿನ್ ಮಾದಕ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿತ್ತು. ಬಂಧಿತನದಿಂದ 1.06 ಲಕ್ಷ ರೂಪಾಯಿ ಮೌಲ್ಯದ 36.16ಗ್ರಾಂ ಹೆರಾಯಿನ್ ಜಪ್ತಿ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ